ಲೋಕಬಂಧು ನ್ಯೂಸ್ | ಪಡುಬಿದ್ರಿ, ಮೇ 1
ಸಂಪೂರ್ಣ ನವೀಕರಣಗೊಂಡು ಬ್ರಹ್ಮಕುಂಭಾಭಿಷೇಕ ಸಂಭ್ರಮದಲ್ಲಿರುವ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳಕ್ಕೆ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮೀಜಿ ಮೇ 3ರಂದು ಭಾನುವಾರ ಭೇಟಿ ನೀಡಲಿದ್ದಾರೆ.
ಅಪರಾಹ್ನ 4 ಗಂಟೆಗೆ ಆಗಮಿಸುವ ಜಗದ್ಗುರುಗಳನ್ನು ಗೌರವಾದರಗಳಿಂದ ದೇವಳಕ್ಕೆ ಬರಮಾಡಿಕೊಳ್ಳಲಾಗುವುದು.
ಬಳಿಕ ಶ್ರೀಗಳಿಂದ ಆಶೀರ್ವಚನ ನಡೆಯಲಿದೆ ಎಂದು ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಾ.ಕೆ. ಪ್ರಕಾಶ ಶೆಟ್ಟಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳೀನಾಥ ಶೆಟ್ಟಿ ತಿಳಿಸಿದ್ದಾರೆ.
