ಮನೆಗೊಂದು ಗ್ರಂಥಾಲಯ ಅಭಿಯಾನ

ಲೋಕಬಂಧು ನ್ಯೂಸ್ | ಉಡುಪಿ, ಮೇ 23
ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ `ಮನೆಗೊಂದು ಗ್ರಂಥಾಲಯ' ಅಭಿಯಾನವನ್ನು ಉಡುಪಿ ಜಿಲ್ಲೆಯಲ್ಲೂ ಆರಂಭಿಸಲಾಗಿದ್ದು, ನಗರದ ಗಾಂಧಿ ಆಸ್ಪತ್ರೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಅವರು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವ್ಯಾಸರಾಜ ತಂತ್ರಿ ಮತ್ತು ಡಾ. ವಿದ್ಯಾ ತಂತ್ರಿ ಅವರಿಗೆ ವಿಶೇಷ ಪ್ರಮಾಣಪತ್ರ ನೀಡಿ ಗೌರವಿಸಿದರು.


ಕಾರ್ಯಕ್ರಮದಲ್ಲಿ ಪ್ರಾಧಿಕಾರದ ವಿಶೇಷ ಕರಪತ್ರ ಬಿಡುಗಡೆಗೊಳಿಸಲಾಯಿತು.


ಆಸ್ಪತ್ರೆಯ ಪ್ರಮುಖರಾದ ಲಕ್ಷ್ಮಿ ಹರಿಶ್ಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಮತ್ತು ರಂಜನಿ ವಸಂತ್, ಪದಾಧಿಕಾರಿಗಳಾದ ಪೂರ್ಣಿಮಾ ಜನಾರ್ದನ್, ಸಿದ್ದಬಸಯ್ಯಸ್ವಾಮಿ ಚಿಕ್ಕಮಠ, ದೀಪಾ ಕರ್ಕಿ, ಆರ್. ವಸಂತ್, ಮನೆಯೇ  ಗ್ರಂಥಾಲಯ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ಮೊದಲಾದವರಿದ್ದರು.