ಲೋಕಬಂಧು ನ್ಯೂಸ್ | ಉಡುಪಿ, ಮೇ 22
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಫೆಡರೇಶನ್ ಸದಸ್ಯರ ಮಕ್ಕಳು 2025- 26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ. 80 ಹಾಗೂ 2024- 25ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ. 70, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ. 60 ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಇತರ ವಿದ್ಯಾರ್ಥಿಗಳು 2025- 26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 95, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ. 85 ಹಾಗೂ 2024-25ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ. 75, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ. 70 ಅಂಕ ಗಳಿಸಿರಬೇಕು.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದ್ದು, ಮೀನುಗಾರಿಕೆ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ 63649 31790ನ್ನು ಸಂಪರ್ಕಿಸಬಹುದು.
ಪ್ರತಿಭಾವಂತ ವಿದ್ಯಾರ್ಥಿಗಳು ಇದನ್ನು ಸದುಪಯೋಗ ಪಡೆಯುವಂತೆ ಫೆಡರೇಶನ್ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶಪಾಲ್ ಸುವರ್ಣ ತಿಳಿಸಿದ್ದಾರೆ.
