ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಲೋಕಬಂಧು ನ್ಯೂಸ್ | ಉಡುಪಿ, ಮೇ 20
ರಾಜ್ಯ ಸರಕಾರದ ಅಧಿಸೂಚನೆಯಂತೆ ಉಡುಪಿ ಜಿಲ್ಲೆ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆ/ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳು ಮತ್ತು 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ ಬೋರ್ಡ್ ಅಥವಾ ಔಟ್ ಬೋರ್ಡ್ ಯಂತ್ರ ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂ. 1ರಿಂದ 31ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧ ಹೇರಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ.
ದೋಣಿ ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಕರಾವಳಿ ಮೀನುಗಾರಿಕೆ ಕೈಗೊಳ್ಳಲು ಅನುಮತಿ ಇದೆ.


ಹವಾಮಾನದ ವೈಪರೀತ್ಯದ ಮುನ್ಸೂಚನೆ ನೀಡಿದಾಗ ಕಡ್ಡಾಯವಾಗಿ ಪಾಲಿಸಬೇಕು. ಮೀನುಗಾರಿಕೆ ನಿಷೇಧವಿರುವುದರಿಂದ ಕಡ್ಡಾಯವಾಗಿ ಎಲ್ಲಾ ದೋಣಿಗಳು ಮೇ 31ರೊಳಗೆ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡಿದ ದೋಣಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.