ಹಿಜಾಬ್ ನಿಷೇಧ ರದ್ದತಿಗೆ ಬಿಜೆಪಿ ವಿರೋಧ

ಲೋಕಬಂಧು ನ್ಯೂಸ್ | ಬೆಂಗಳೂರು, ಮೇ 13
ಉಡುಪಿಯಲ್ಲಿ 2022ರಲ್ಲಿ ಶುರುವಾಗಿದ್ದ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದ್ದು, ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿದೆ. ಅದನ್ನು ಬಿಜೆಪಿ ವಿರೋಧಿಸಿದೆ.
ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಇದು ತೀವ್ರ ಸ್ವರೂಪ ಪಡೆದುಕೊಂಡಿದ್ದು ಕಾನೂನು ಸಮರಕ್ಕೂ ಕಾರಣವಾಗಿತ್ತು.


ಇದೀಗ ರಾಜ್ಯ ಸರ್ಕಾರ ಹಿಜಾಬ್ ವಿಚಾರದಲ್ಲಿ ತನ್ನ ನಿಲುವನ್ನು ಬದಲಿಸಿದ್ದು, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅನುಮತಿ ನೀಡಿದೆ.


ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ.