ಲೋಕಬಂಧು ನ್ಯೂಸ್ | ಉಜಿರೆ, ಮೇ 12
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಸೋಮವಾರ ಕುಟುಂಬ ಸದಸ್ಯರೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬೃಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಮೊದಲಾದವರಿದ್ದರು.