ಲೋಕಬಂಧು ನ್ಯೂಸ್ ಕಾರ್ಕಳ, ಮೇ 4
ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಅಲ್ಲಿ ಸುದೀರ್ಘ ಕಾಲದಿಂದ ಕಾಡುತ್ತಿದ್ದ ಅರಾಜಕತೆಗೆ ಕೊನೆಗೂ ಅಲ್ಲಿನ ಮತದಾರ ಅಂತ್ಯ ಹಾಡಿದ್ದಾರೆ. ಆ ಮೂಲಕ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಕನಸು ನನಸಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ವಿ.ಸುನಿಲ್ ಕುಮಾರ್ ವ್ಯಾಖ್ಯಾನಿಸಿದ್ದಾರೆ.ಬಾಂಗ್ಲಾ ದೇಶದ ಮತಾಂಧರಿಗೆ ದೇಶದ ಹೆಬ್ಬಾಗಿಲು ತೆರೆದು ಸ್ವಾಗತಿಸಿ ಅವರನ್ನೇ ತನ್ನ ಮತ ಬ್ಯಾಂಕ್ ಆಗಿಸಿಕೊಂಡು ಕ್ರೂರ ದಬ್ಬಾಳಿಕೆ ನಡೆಸುತ್ತಿದ್ದ ಮಮತಾ ಬ್ಯಾನರ್ಜಿಯವರ ದುಷ್ಟ ಅಟ್ಟಹಾಸವನ್ನು ಕುಟ್ಟಿ ಬಿಸಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ನಿರಂತರ ಪ್ರಯತ್ನ ಅವರ್ಣನೀಯ.
ತೃಣಮೂಲ ಕಾಂಗ್ರೆಸ್‌ನ ಗೂಂಡಾಗಿರಿ ರಾಜಕಾರಣಕ್ಕೆ ಕೊನೆ ಹಾಡಲಾಗಿದೆ.
ಅದೇ ರೀತಿ ಆಸ್ಸಾಂನಲ್ಲಿ ಸತತ ಮೂರನೇ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದೆ.
ಪುದುಚೇರಿಯಲ್ಲಿ ಎನ್‌ಡಿಎ ಗೆಲುವು ಅಭೂತಪೂರ್ವ.
ಒಟ್ಟಾರೆ ಪಂಚರಾಜ್ಯಗಳ ಚುನಾವಣೆಯಲ್ಲಿ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಕಾರಣರಾದ ಬಿಜೆಪಿ ಕಾರ್ಯಕರ್ತರ ಅವಿಶ್ರಾಂತ ಶ್ರಮ ಅಭಿನಂದನೀಯ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ.