ಲೋಕಬಂಧು ನ್ಯೂಸ್ ಕಾಪು, ಮೇ 6
ಈಚೆಗೆ ನಡೆದ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಮೇ 4ರಂದು ಕಾಪು ಮಂಡಲ ಬಿಜೆಪಿ ಕಚೇರಿ ಬಳಿ ವಿಜಯೋತ್ಸವ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಗೆಲುವಿಗೆ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಪಕ್ಷದ ವರಿಷ್ಠರು, ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್ ಮತ್ತು ಸೋಮಶೇಖರ ರೆಡ್ಡಿ, ಕಾಪು ಪುರಸಭೆ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಉಪಾಧ್ಯಕ್ಷೆ ಸರಿತಾ ಶಿವಾನಂದ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಮತ್ತು ಶರಣ್ ಕುಮಾರ್ ಮಟ್ಟು ಮೊದಲಾದವರಿದ್ದರು.