ಟಿವಿಕೆ ವಿಜಯ್'ಗೆ ಮೊದಲು ಬೆಂಬಲ ಘೋಷಿಸಿದ ಕಾಂಗ್ರೆಸ್‌ಗೆ ಸಚಿವ ಸ್ಥಾನ ಇಲ್ಲ!

ಲೋಕಬಂಧು ನ್ಯೂಸ್ | ಚೆನ್ನೈ, ಮೇ 10
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳೊಂದಿಗೆ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸರ್ಕಾರ ರಚನೆಗೆ ಮೊದಲು ಬೆಂಬಲ ಘೋಷಣೆ ಮಾಡಿದ್ದ ಕಾಂಗ್ರೆಸ್ ಪಕ್ಷದ ಯಾವೊಬ್ಬ ಶಾಸಕನೂ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸದೇ ಇರುವುದು ಅಚ್ಚರಿಗೆ ಕಾರಣವಾಗಿದೆ.
ನಟ ವಿಜಯ್ ಅವರ ಹೊಸ ಸಚಿವ ಸಂಪುಟದಲ್ಲಿ ಒಂಭತ್ತು ಸಚಿವರಿದ್ದು, ಯುವ ಹಾಗೂ ಅನುಭವಿಗಳ ಮಿಶ್ರಣವಾಗಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಆಪ್ತ ತಂಡದ ಸದಸ್ಯರಿಗೂ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿದೆ.


ಆದರೆ, ಟಿವಿಕೆಗೆ ಬಹುಮತ ತಲುಪಲು ಮೊದಲಿಗೆ ಬೆಂಬಲ ನೀಡಿದ್ದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಒಬ್ಬ ನಾಯಕನಿಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ.