ಲೋಕಬಂಧು ನ್ಯೂಸ್ | ಉಡುಪಿ, ಮೇ 8
ಕಾಂಗ್ರೆಸ್ ಮುಂದಾಳು ಹಾಗೂ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಲೋಕ ಕಲ್ಯಾಣಾರ್ಥವಾಗಿ ಮೇ 14ರಿಂದ 19ರ ವರೆಗೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಆಯೋಜಿಸಿರುವ ಮಹಾರುದ್ರ ಯಾಗ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಿತ ಹಲವು ಸಚಿವರು, ಗಣ್ಯರಿಗೆ ಅಹ್ವಾನ ನೀಡಲಾಯಿತು.
ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಲಿರುವ ರಾಜ್ಯ ಸಾರಿಗೆ ಹಾಗೂ ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ಇಲಾಖೆ ಸಚಿವ ರಾಮಲಿಂಗ ರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯೆ ಅರತಿ ಕೃಷ್ಣ ಮತ್ತು ಇತರ ಗಣ್ಯರನ್ನು ಮಹಾರುದ್ರ ಯಾಗ ಸೇವಾಕರ್ತ ಮತ್ತು ಮಹಾರುದ್ರ ಯಾಗ ಸಮಿತಿ ಕಾರ್ಯಾಧ್ಯಕ್ಷ ಪ್ರಸಾದ್ ರಾಜ್ ಕಾಂಚನ್ ಅಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು.ಈ ಸಂದರ್ಭದಲ್ಲಿ ಮಹಾರುದ್ರ ಯಾಗ ಸಮಿತಿ ಪ್ರಧಾನ ಸಂಚಾಲಕರಾದ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಮತ್ತು ತಾರಾನಾಥ ಪೂಜಾರಿ ಉಪಸ್ಥಿತರಿದ್ದರು.