ಉಚಿತ ಕನ್ನಡಕ ವಿತರಣೆ

ಲೋಕಬಂಧು ನ್ಯೂಸ್ | ಶಿವಮೊಗ್ಗ, ಮೇ 8
ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಮತ್ತು ಶಿವಮೊಗ್ಗ ಸಂಸದ ಶ್ರೀ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಉಡುಪಿಯ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮತ್ತು ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಒನ್ ಸೈಟ್ ಎಸ್ಸಿಲಾರ್ ಲಕ್ಸೋಟ್ಟಿಕಾ ಫೌಂಡೇಶನ್ ಬೆಂಗಳೂರು ಸಹಯೋಗದೊಂದಿಗೆ ಶಿಕಾರಿಪುರದ ಮಂಗಳ ಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣಾ ಶಿಬಿರದಲ್ಲಿ ಆಯ್ಕೆಯಾದ 82 ಮಂದಿ ಫಲಾನುಭವಿಗಳಿಗೆ ಪ್ರಸಾದ್ ನೇತ್ರಾಲಯ ವತಿಯಿಂದ ಉಚಿತ ಶಸ್ತ್ರ ಚಿಕಿತ್ಸೆ ನಡೆಸಿ, 342 ಮಂದಿಗೆ ಉಚಿತ ಕನ್ನಡಕ ವಿತರಿಸಲಾಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯ ಅತಿಥಿಗಳಾಗಿದ್ದರು.


ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಫಲಾನುಭವಿಗಳಿಗೆ ಕನ್ನಡಕ ವಿತರಿಸಿದರು.


ಈ ಸಂದರ್ಭದಲ್ಲಿ ಪ್ರಸಾದ್ ನೇತ್ರಾಲಯ ಸಮೂಹ ಕಣ್ಣಿನ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರನ್ನು ಸನ್ಮಾನಿಸಲಾಯಿತು.