ಮಾದಕ ದ್ರವ್ಯ ಸಾಗಾಟ ಆರೋಪಿ ಬಂಧನ

ಲೋಕಬಂಧು ನ್ಯೂಸ್ | ಉಡುಪಿ, ಮೇ 19
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಣಗುಡ್ಡೆ ನಿವಾಸಿ ಅಬ್ದುಲ್ ರೌಫ್ ಎಂಬಾತನನ್ನು ಮಾದಕ ದ್ರವ್ಯ ಮಾರಾಟ ಆರೋಪದಡಿ ಮಂಗಳವಾರ ಬಂಧಿಸಲಾಗಿದೆ.
ಆತನ ವಿರುದ್ಧ ಮಣಿಪಾಲ, ಉಡುಪಿ ನಗರ ಹಾಗೂ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ತಲಾ 1 ಪ್ರಕರಣ ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿದೆ.


ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ದಾಖಲಾದ 3 ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿದ್ದು, ದಾಖಲಾದ 2 ಸೇವನೆ ಪ್ರಕರಣಗಳಲ್ಲಿ ಶಿಕ್ಷೆ ಆಗಿದೆ.


ಬಂಧಿತ ಆರೋಪಿಯನ್ನು ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.