ಕಾಪು ಹೊಸಮಾರಿಗುಡಿ ಸನ್ನಿಧಿಗೆ ಬಳ್ಳಾರಿ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಭೇಟಿ

ಲೋಕಬಂಧು ನ್ಯೂಸ್ | ಕಾಪು, ಮೇ 8
ಬಳ್ಳಾರಿಯ ಮಾಜಿ ಶಾಸಕ ಜಿ. ಸೋಮಶೇಖರ್ ರೆಡ್ಡಿ ಮತ್ತು ಮಾಜಿ ಮೇಯರ್ ಶ್ರೀನಿವಾಸ್ ಹಾಗೂ ಅನೇಕ ರಾಜಕೀಯ ನಾಯಕರು ಇಲ್ಲಿನ ಶ್ರೀ ಹೊಸ ಮಾರಿಗುಡಿ ಸನ್ನಿಧಿಗೆ ಭೇಟಿ ನೀಡಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿ ದರುಶನ ಪಡೆದು, ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.
ದೇವಳದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮತ್ತು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಮಾತೃ ವೈಭವ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನ ಸಮಿತಿ ಸದಸ್ಯ ರವೀಂದ್ರ ಮಲ್ಲಾರ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಸಾವಿತ್ರಿ ಗಣೇಶ್, ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಮೊದಲಾದವರಿದ್ದರು.