ಕೊಡವೂರು ಮಹಾರುದ್ರ ಯಾಗ: ಸಹಸ್ರಾರು ಮಂದಿಗೆ ಅನ್ನಪ್ರಸಾದ

ಲೋಕಬಂಧು ನ್ಯೂಸ್ ಉಡುಪಿ, ಮೇ 17
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರ ಯಾಗ ಮಹೋತ್ಸವಕ್ಕೆ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಭಾನುವಾರ ಸಾವಿರಾರು ಮಂದಿ ಭಕ್ತರು ದೇವರ ದರ್ಶನ ಪಡೆದು ಧಾರ್ಮಿಕ ವಿಧಿ-ವಿಧಾನಗಳಲ್ಲಿ ಭಾಗವಹಿಸಿದರು.ಜಿಲ್ಲೆಯ ವಿವಿಧೆಡೆಗಳಷ್ಟೇ ಅಲ್ಲದೆ ಹೊರ ಜಿಲ್ಲೆಗಳಿಂದಲೂ ಭಕ್ತರು ಆಗಮಿಸಿ ಯಾಗದಲ್ಲಿ ಪಾಲ್ಗೊಂಡರು.ವೇದಘೋಷ, ಪೂಜೆ, ಹೋಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನಡುವೆ ದೇವಸ್ಥಾನ ಆವರಣದಲ್ಲಿ ಭಕ್ತಿಭಾವ ಮೇಳೈಸಿತು‌.ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸಹಸ್ರಾರು ಮಂದಿ ಭೋಜನ ಸ್ವೀಕರಿಸಿದರು. ದೇವಸ್ಥಾನ ಸಮಿತಿಯಿಂದ ಭಕ್ತರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲಾಗಿತ್ತು.


ಉಡುಪಿ ಪರ್ಯಾಯ ಮಹೋತ್ಸವದ ಮಾದರಿಯಲ್ಲಿ ನಡೆಯುತ್ತಿರುವ ಮಹಾರುದ್ರ ಯಾಗದ ಯಶಸ್ಸಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಾಕ್ಷಿಗಳಾದರು.


ದೇವಸ್ಥಾನದ ಪರಿಸರದಲ್ಲಿ ದಿನವಿಡೀ ಭಕ್ತರ ಸಂಚಾರ ಕಂಡುಬರುತ್ತಿದೆ.