ಲೋಕಬಂಧು ನ್ಯೂಸ್ ಉಡುಪಿ ಮೇ 18
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಮಹಾರುದ್ರ ಯಾಗಕ್ಕೆ ಅಗಮಿಸುವ ಭಕ್ತರ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ ಕಲ್ಪಿಸಲಾಗಿದೆ.ಮೇ 18 ಮತ್ತು 19ರಂದು ಎರಡು ದಿನಗಳ ಕಾಲ ಈ ವಿಶೇಷ ಸೇವೆ ಲಭ್ಯವಿದ್ದು, ಉಡುಪಿ ಹಾಗೂ ಬ್ರಹ್ಮಾವರ ಭಾಗಗಳಿಂದ ಕೊಡವೂರು ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಆಯೋಜಕರು ತಿಳಿಸಿದ್ದಾರೆ.
ಮಹಾರುದ್ರ ಯಾಗ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗುಂಪುಗಳಾಗಿ ಬರುವ ಭಕ್ತರಿಗಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಬಸ್ ಸೇವೆ ಕುರಿತು ಹೆಚ್ಚಿನ ಮಾಹಿತಿಗಾಗಿ 8660179172ನ್ನು ಸಂಪರ್ಕಿಸಲು ಕೋರಲಾಗಿದೆ.