ಕೊಡವೂರು ಮಹಾರುದ್ರ ಯಾಗ: ಸಚಿವೆ ಹೆಬ್ಬಾಳ್ಕರ್ ಭೇಟಿ

ಲೋಕಬಂಧು ನ್ಯೂಸ್ ಉಡುಪಿ, ಮೇ 16
ಕೊಡವೂರು ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಮಹಾರುದ್ರ ಯಾಗ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಸಂಜೆ ಆಗಮಿಸಿದರು.
ಮಹಾರುದ್ರ ಯಾಗ ಸಮಿತಿ ಕಾರ್ಯಾಧ್ಯಕ್ಷ ಪ್ರಸಾದ್ ರಾಜ್ ಕಾಂಚನ್‌ ಹಾಗೂ‌ ಸಮಿತಿ ಪದಾಧಿಕಾರಿಗಳು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಬಳಿಕ ಸಚಿವರು ಶ್ರೀ‌ ಶಂಕರನಾರಾಯಣ ದೇವರ ದರ್ಶನ ಪಡೆದರು. ಸಚಿವರಿಗೆ ಶಾಲು ಹೊದಿಸಿ ದೇವರ ವಿಗ್ರಹ ಸ್ಮರಣಿಕೆ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಪಂ ಸಿಇಒ ಪ್ರತೀಕ್ ಬಾಯಲ್, ಕೊಡವೂರು ತ ಶಂಕರನಾರಾಯಣ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಮಹಾರುದ್ರ ಯಾಗ ಸಮಿತಿ ಪ್ರಧಾನ ಸಂಚಾಲಕ ತಾರಾನಾಥ ಪೂಜಾರಿ, ಸಂಚಾಲಕರಾದ ನಂದಕಿಶೋರ್ ಕೆಮ್ಮಣ್ಣು ಮತ್ತು ರಮೇಶ್ ತಿಂಗಳಾಯ ಮೊದಲಾದವರಿದ್ದರು.