ಲೋಕಬಂಧು ನ್ಯೂಸ್ | ಉಡುಪಿ, ಮೇ 19
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಉದ್ಯಮಿ ಹಾಗೂ ಕಾಂಗ್ರೆಸ್ ನೇತಾರ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರ ಯಾಗ ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಭಾಗವಹಿಸಿದರು.
ಮಹಾರುದ್ರ ಯಾಗ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಸೇವಾಕರ್ತ ಪ್ರಸಾದ್ ರಾಜ್ ಕಾಂಚನ್ ಆತ್ಮೀಯವಾಗಿ ಬರಮಾಡಿಕೊಂಡರು.
ಕೊಡವೂರು ದೇವಳ ಆಡಳಿತ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಸಂಚಾಲಕರಾದ ಕೃಷ್ಣಮೂರ್ತಿ ಆಚಾರ್ಯ ಮತ್ತು ತಾರಾನಾಥ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ತೋಟದಮನೆ ದಿವಾಕರ ಶೆಟ್ಟಿ ಮೊದಲಾದವರಿದ್ದರು.
