ಲೋಕಬಂಧು ನ್ಯೂಸ್ | ಉಡುಪಿ, ಮೇ 19
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಉದ್ಯಮಿ ಹಾಗೂ ಕಾಂಗ್ರೆಸ್ ನೇತಾರ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರ ಯಾಗ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜಾ ಭಾಗವಹಿಸಿದರು.
ಕೊಡವೂರು ದೇವಳ ಆಡಳಿತ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಸಂಚಾಲಕರಾದ ಕೃಷ್ಣಮೂರ್ತಿ ಆಚಾರ್ಯ ಮತ್ತು ತಾರಾನಾಥ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ದೇವಳದ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಜನಾರ್ದನ ಕೊಡವೂರು ಮೊದಲಾದವರಿದ್ದರು.

