ಕೊಡವೂರು ಮಹಾರುದ್ರಯಾಗ: ಭಜನಾ ಮಂದಿರ ಪ್ರಮುಖರ ಸಭೆ

ಲೋಕಬಂಧು ನ್ಯೂಸ್ | ಉಡುಪಿ, ಮೇ 6
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಕಾಂಗ್ರೆಸ್‌ ಮುಂದಾಳು, ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಮೇ 14ರಿಂದ 19ರ ವರೆಗೆ ನಡೆಯುವ ಮಹಾರುದ್ರಯಾಗ ಕಾರ್ಯಕ್ರಮದ ಪೂರ್ವಭಾವಿಯಾಗಿ ಭಜನಾ ಮಂದಿರ, ದೇವಸ್ಥಾನ, ದೈವಸ್ಥಾನ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಡಳಿತ ಸಮಿತಿ ಮತ್ತು ಮಾತೃ ಮಂಡಳಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆ ಕೊಡವೂರು ದೇವಳದ ವಸಂತ ಮಂಟಪದಲ್ಲಿ  ನಡೆಯಿತು.
ವಿವಿಧ ಭಜನಾ ಮಂದಿರ, ದೇವಸ್ಥಾನ, ದೈವಸ್ಥಾನ, ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.


ಆರು ದಿನಗಳ‌ ಕಾಲ‌ ನಡೆಯುವ ಮಹಾರುದ್ರಯಾಗದ ಪೂರ್ವ ಭಾವಿ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಮಹಾರುದ್ರಯಾಗದ ಸೇವಾಕರ್ತ ಪ್ರಸಾದ್ ರಾಜ್ ಕಾಂಚನ್, ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮತ್ತು, ಮಹಾರುದ್ರಯಾಗ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ,ಪ್ರಧಾನ ಸಂಚಾಲಕರಾದ ಕೃಷ್ಣಮೂರ್ತಿ ಅಚಾರ್ಯ ಕಿನ್ನಿಮೂಲ್ಕಿ ಮತ್ತು ತಾರನಾಥ ಪೂಜಾರಿ, ಮಹಾರುದ್ರ ಯಾಗ ಸಮಿತಿ ಸದಸ್ಯರು ಉಪಸ್ಥಿತರಿದ್ದರು.