ಕುಸುಮಾ ನಾಗರಾಜ್'ಗೆ ಕಸಾಪ ಪುರಸ್ಕಾರ

ಲೋಕಬಂಧು ನ್ಯೂಸ್ | ಉಡುಪಿ, ಮೇ 6
ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ನಿರಂತರ ತೊಡಗಿಸಿಕೊಂಡು ಯಾವುದೇ ಸಮಾರಂಭವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ಶ್ರೀ ರಮಾನಂದ ಗುರೂಜಿ ಆಡಳಿತದಲ್ಲಿ ಕಾರ್ಯಾಚರಿಸುತ್ತಿರುವ ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಉಸ್ತುವಾರಿ ಹಾಗೂ ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯ ಸಂಯೋಜಕಿ ಕುಸುಮಾ ನಾಗರಾಜ್ ಅವರಿಗೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ವತಿಯಿಂದ ಡಾ.ಭಾಸ್ಕರಾನಂದ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ 'ಭೀಷ್ಮೋತ್ಸವ' ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 'ಕಸಾಪ ಪುರಸ್ಕಾರ' ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಮೇಳನಾಧ್ಯಕ್ಷ ಭಾಸ್ಕರಾನಂದ ಕುಮಾರ್, ಡಾ.ನಳಿನಿ ಭಾಸ್ಕರಾನಂದ‌ ಕುಮಾರ್, ಉಡುಪಿ ವಿಶ್ವನಾಥ ಶೆಣೈ, ಗಾಂಧಿ ಆಸ್ಪತ್ರೆ ಆಡಳಿತ ನಿರ್ದೇಶಕ ಎಂ. ಹರಿಶ್ಚಂದ್ರ, ಕಸಾಪ ಉಡುಪಿ ತಾಲೂಕು ಘಟಕ ಅಧ್ಯಕ್ಷ ರವಿರಾಜ್ ಎಚ್.ಪಿ., ಗೌರವ ಕಾರ್ಯದರ್ಶಿಗಳಾದ  ಜನಾರ್ದನ್ ಕೊಡವೂರ್ ಮತ್ತು ರಂಜನಿ ವಸಂತ್ ,  ಡಾ.ಗಣನಾಥ ಎಕ್ಕಾರ್, ಡಾ.ಸುಬ್ರಮಣ್ಯ ಭಟ್, ಸತೀಶ್ ಕೊಡವೂರು, ಪೂರ್ಣಿಮಾ ಜನಾರ್ದನ್, ಆರ್. ವಸಂತ್, ರಾಜೇಶ್ ಭಟ್ ಪಣಿಯಾಡಿ, ರಾಘವೇಂದ್ರ ಪ್ರಭು ಕರ್ವಾಲು, ಪದ್ಮಾಸಿನಿ, ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ ಇದ್ದರು.