ಮೇ 24: ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ

ಲೋಕಬಂಧು ನ್ಯೂಸ್ | ಉಡುಪಿ, ಮೇ 22
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಆಶ್ರಯದಲ್ಲಿ ಮೇ 24ರಂದು ವಿಪ್ರರಿಗಾಗಿ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಪರಿಷತ್ ಮಾಜಿ ಅಧ್ಯಕ್ಷ ಹಾಗೂ ಕಾರ್ಯಕ್ರಮದ ರೂವಾರಿ ವಿಷ್ಣುಪ್ರಸಾದ್ ಪಾಡಿಗಾರು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಜನಾ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಕ್ಕಳು, ಮಹಿಳೆಯರು ಮತ್ತು ಪುರುಷರಿಗಾಗಿ ಮೂರು ವಿಭಾಗದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಅನುಕ್ರಮವಾಗಿ 15 ಸಾವಿರ, 10 ಸಾವಿರ ಮತ್ತು 5 ಸಾವಿರ ರೂ. ನೀಡಲಾಗುವುದು.


ಮೇ 24ರಂದು ಬೆಳಿಗ್ಗೆ 9 ಗಂಟೆಗೆ ಗುಂಡಿಬೈಲು ಬ್ರಾಹ್ಮೀ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.


ಯುವ ಬ್ರಾಹ್ಮಣ ಪರಿಷತ್ ಅಧ್ಯಕ್ಷ ರಘುಪತಿ ರಾವ್, ಕಾರ್ಯದರ್ಶಿ ಅಮಿತಾ ಕ್ರಮಧಾರಿ, ಮಾಜಿ ಅಧ್ಯಕ್ಷ ಚಂದ್ರಕಾಂತ ಕೆ.ಎನ್., ಸಲಹೆಗಾರರಾದ ಉಷಾ ಹೆಬ್ಬಾರ್ ಇದ್ದರು.