ಲೋಕಬಂಧು ನ್ಯೂಸ್ ಬೆಂಗಳೂರು, ಮೇ 10
ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಭಾನುವಾರ ಬೆಳಗಿನ ಜಾವ 3.15ಕ್ಕೆ ವೇಳೆ ನಿಧನರಾದರು.ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅವರಿಗೆ 66 ವರ್ಷ ವಯಸ್ಸಾಗಿತ್ತು.
ಮೊಣಕಾಲು ಶಸ್ತ್ರಚಿಕಿತ್ಸೆ
ಮೊಣಕಾಲು ಶಸ್ತ್ರಚಿಕಿತ್ಸೆ ಸಂಬಂಧ ಸಚಿವ ಸುಧಾಕರ್ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಳಿಕ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದರು.
ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದ ಸುಧಾಕರ್, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು.