ಸಚಿವ ಸುಧಾಕರ್ ಪಂಚಭೂತಗಳಲ್ಲಿ ಲೀನ‌

ಲೋಕಬಂಧು ನ್ಯೂಸ್‌ ಹಿರಿಯೂರು, ಮೇ 11
ಅನಾರೋಗ್ಯದಿಂದಾಗಿ ಭಾನುವಾರ ನಿಧನರಾದ ಸಚಿಚ ಡಿ‌‌. ಸುಧಾಕರ್ ಅವರ ಅಂತ್ಯಕ್ರಿಯೆ ಸೋಮವಾರ ನಡೆದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.ಇದೇ ವೇಳೆ ಮುಖ್ಯಮಂತ್ರಿ ಅವರು ಸುಧಾಕರ್  ಕುಟುಂಬದವರಿಗೆ ಸಾಂತ್ವನ ಹೇಳಿದರು.


ಸರ್ಕಾರಿ ಗೌರವದ ಬಳಿಕ ಮುಖ್ಯಮಂತ್ರಿ ರಾಷ್ಟ್ರಧ್ವಜವನ್ನು ಕುಟುಂಬದವರಿಗೆ ಹಸ್ತಾಂತರಿಸಿದರು.ಸ್ಪೀಕರ್ ಯು.ಟಿ. ಖಾದರ್, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಜಿ.ಪರಮೇಶ್ವರ್, ಈಶ್ವರ್ ಖಂಡ್ರೆ,‌ ಎಚ್.ಕೆ. ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.