ಲೋಕಬಂಧು ನ್ಯೂಸ್ ಉಡುಪಿ, ಮೇ 6
ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ನೂತನ ವಿಕಾರ್ ಜನರಲ್ (ಶ್ರೇಷ್ಠಗುರು) ಆಗಿ ವಂ. ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ಅವರನ್ನು ನೂತನ ಉಡುಪಿ ಬಿಷಪ್ ವಂ.ಡಾ. ಲೆಸ್ಲಿ ಕ್ಲಿಫರ್ಡ್ ಡಿ'ಸೋಜಾ ನೇಮಿಸಿದ್ದಾರೆ.ವಂ.ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ಪ್ರಸ್ತುತ ಕಳತ್ತೂರು ಚರ್ಚಿನ ಧರ್ಮಗುರುಗಳಾಗಿದ್ದು, ಬಿಷಪ್ ಹೌಸ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಹುದ್ದೆಯನ್ನು ಸ್ವೀಕರಿಸಿದರು.
ಉಡುಪಿ ಬಿಷಪ್ ವಂ.ಡಾ. ಲೆಸ್ಲಿ ಕ್ಲಿಫರ್ಡ್ ಡಿ'ಸೋಜಾ ಅವರು ಪ್ರಾರ್ಥನಾ ಸಭೆ ಹಾಗೂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಧರ್ಮಪ್ರಾಂತ್ಯದ ಚಾನ್ಸಲರ್ ವಂ. ಸ್ಟೀಫನ್ ಡಿ'ಸೋಜಾ, ಕಾಲೇಜ್ ಆಫ್ ಕನ್ಸಲ್ಟರ್ಸ್ ಸದಸ್ಯರು, ವಂ. ಜಿತೇಶ್ ಕ್ಯಾಸ್ತಲಿನೋ ಮತ್ತು ಪ್ರೊಕ್ಯುರೇಟರ್ ಡಿ'ಸೋಜಾ ಉಪಸ್ಥಿತರಿದ್ದರು.