ಲೋಕಬಂಧು ನ್ಯೂಸ್ | ಮೂಡುಬಿದಿರೆ, ಮೇ 8
ಮೂಡುಬಿದಿರೆ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಕಲ್ಲಮುಂಡ್ಕೂರು ಅರಿಯಾಳ ನಿವಾಸಿ ಗಂಗಾಧರ ಶೆಟ್ಟಿ (68) ಶುಕ್ರವಾರ ನಿಧನರಾದರು.
ಕಲ್ಲಮುಂಡ್ಕೂರು ಬಾನಂಗಡಿಯಲ್ಲಿ ಗುರು ಎಂಟರ್‌ಪ್ರೈಸಸ್ ಸಂಸ್ಥೆ ನಡೆಸುತ್ತಿದ್ದ ಅವರು 'ಗಂಗು ಶೆಟ್ಟಿ' ಎಂದೇ ಜನಜನಿತರಾಗಿದ್ದರು.
ನಾಟಕ ಕಲಾವಿದರಾಗಿ ಹಲವಾರು ಸಾಮಾಜಿಕ ನಾಟಕಗಳಲ್ಲಿ ಅಭಿನಯಿಸಿದ್ದರು.
ಕಲ್ಲಮುಂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷರಾಗಿ, ಹಲವಾರು ಧಾರ್ಮಿಕ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಜನಾನುರಾಗಿಯಾಗಿದ್ದರು.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಗಂಗಾಧರ ಶೆಟ್ಟಿ ನಿಧನಕ್ಕೆ ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್ ಮುಂದಾಳು ಮಿಥುನ್ ರೈ ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.