ಲೋಕಬಂಧು ನ್ಯೂಸ್ | ಬೆಂಗಳೂರು, ಮೇ 11
ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಯಾವ ಕುರ್ಚಿಯೂ ಖಾಲಿ ಇಲ್ಲ. ಪ್ರಧಾನಮಂತ್ರಿ ಮೋದಿ ಕಣ್ಣಿಗೆ ಏನೇನು ಕಾಣಿದೆಯೋ ಗೊತ್ತಿಲ್ಲ. ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಮೋದಿಯವರು ದೇಶದ ಪ್ರಧಾನಿಯಾಗಿರುವುದರಿಂದ ಸಿಎಂ ಕುರ್ಚಿ ಅಲುಗಾಡುತ್ತಿದೆ ಅಥವಾ ಖಾಲಿ ಇದೆ ಎನ್ನುವ ಬಗ್ಗೆ ಅವರಲ್ಲಿ ಮಾಹಿತಿ ಇರಬಹುದು. ಆದರೆ, ನನಗೆ ಗೊತ್ತಿರುವಂತೆ ರಾಜ್ಯದಲ್ಲಿ ಯಾವ ಕುರ್ಚಿಯೂ ಖಾಲಿ ಇಲ್ಲ ಎಂದರು.
