ಲೋಕಬಂಧು ನ್ಯೂಸ್ ಕಲಬುರ್ಗಿ, ಮೇ 10
ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಿ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿಚ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.ನಗರದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಗ್ರಾಮ ಪಂಚಾಯತ್ ಗಡಿ ಗುರುತಿಸುವ ಪ್ರಕ್ರಿಯೆಗೆ ಸಂಬಂಧಿಸಿದ ಆಕ್ಷೇಪಣೆ ಸಲ್ಲಿಸುವ ಅವಧಿ ಈಗಾಗಲೇ ಮುಕ್ತಾಯಗೊಂಡಿದ್ದು ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.
ಗ್ರಾಮ ಪಂಚಾಯತ್ ನಂತರ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳನ್ನೂ ಹಂತ ಹಂತವಾಗಿ ನಡೆಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಈ ಬಗ್ಗೆ ಮುಖ್ಯಮಂತ್ರಿ ದ್ದರಾಮಯ್ಯ ಮತ್ತು ಪಕ್ಷದ ಹೈಕಮಾಂಡ್ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಲಬುರ್ಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ,ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಇದ್ದರು.