ಲೋಕಬಂಧು ನ್ಯೂಸ್ | ಉಡುಪಿ, ಮೇ 20
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಸಂಘಟಿಸಿದ್ದ ಮಹಾರುದ್ರ ಯಾಗದಲ್ಲಿ ಕೈಗೊಂಡಿದ್ದ ಸಂಕಲ್ಪದಂತೆ ಉದ್ಯಮಿ, ಕಾಂಗ್ರೆಸ್ ಮುಂದಾಳು ಪ್ರಸಾದ್ ರಾಜ್ ಕಾಂಚನ್ ಬುಧವಾರ ದನ- ಕರು ಸಹಿತ ಸವತ್ಸಧೇನು ದಾನ ನೆರವೇರಿಸಿದರು.
ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಪುರೋಹಿತರ ನೇತೃತ್ವದಲ್ಲಿ ಧಾರ್ಮಿಕ ವಿಧಿ- ವಿಧಾನಗಳು ನೆರವೇರಿದವು.ಈ ಸಂದರ್ಭದಲ್ಲಿ ಪ್ರಸಾದ್ ರಾಜ್ ಕಾಂಚನ್ ದಂಪತಿ ಪೂಜೆಯಲ್ಲಿ ಭಾಗವಹಿಸಿದರು. ಗೋಮಾತೆಗೆ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗೋದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ರುದ್ರಯಾಗ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಸಂಚಾಲಕರಾದ ತಾರಾನಾಥ ಪೂಜಾರಿ ಮತ್ತು ಕೃಷ್ಣಮೂರ್ತಿ ಆಚಾರ್ಯ, ಸಮಿತಿ ಸದಸ್ಯರು, ದೇವಸ್ಥಾನದ ಪ್ರಮುಖರು, ಭಕ್ತಾದಿಗಳು ಉಪಸ್ಥಿತರಿದ್ದರು.