ಲೋಕಬಂಧು ನ್ಯೂಸ್ | ಉಡುಪಿ, ಮೇ 15
ಕೇಂದ್ರ ಸರಕಾರ 4 ಲೇಬರ್ ಕೋಡ್ ಬಗ್ಗೆ ಅಧಿಸೂಚನೆ ಪತ್ರ ಬಿಡುಗಡೆಗೊಳಿಸಿದ್ದನ್ನು ವಿರೋಧಿಸಿ ಸಿಟಿಯು ಪ್ರತಿಭಟನೆ ನಡೆಸಿತು.
ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಸಿಐಟಿಯು ಉಡುಪಿ ವಲಯ ಸಮಿತಿ ನೇತೃತ್ವದಲ್ಲಿ ಅಧಿಸೂಚನೆಯ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿತು.
ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ, ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾಧ್ಯಕ್ಷ ಸಂಜೀವ ಬಳ್ಕೂರು ಮೊದಲಾದವರು ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಬಗ್ಗೆ ಮಾತನಾಡಿದರು.
ಉಡುಪಿ ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷ ಸುಭಾಷ್ ನಾಯಕ್, ಮುಖಂಡರಾದ ಸೈಯದ್, ಮುರಳಿ, ಜನರಲ್ ವರ್ಕಸ್ ಯೂನಿಯನ್ ಕಾರ್ಯದರ್ಶಿ ರಮೇಶ್, ಬೀಡಿ ಆ್ಯಂಡ್ ಟೊಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷೆ ನಳಿನಿ ಎಸ್., ಕಾರ್ಯದರ್ಶಿ ಉಮೇಶ್ ಕುಂದರ್, ಜನವಾದಿ ಮಹಿಳಾ ಸಂಘದ ಉಡುಪಿ ಜಿಲ್ಲಾಧ್ಯಕ್ಷೆ ಸರೋಜ ಎಸ್., ಮುಖಂಡರಾದ ಶಾರದ, ಸಿಐಟಿಯು ಮುಖಂಡರಾದ ನಾಗೇಶ್, ವಿಶ್ವನಾಥ ಇದ್ದರು.
ಸಿಐಟಿಯು ಉಡುಪಿ ವಲಯ ಸಂಚಾಲಕ ಕವಿರಾಜ್ ಎಸ್. ಕಾಂಚನ್ ನಿರೂಪಿಸಿ, ವಂದಿಸಿದರು.
