ಲೋಕಬಂಧು ನ್ಯೂಸ್ | ಉಡುಪಿ, ಮೇ 22
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ ಆಯೋಜಿಸುತ್ತಿರುವ 'ಮನೆಗೊಂದು ಗ್ರಂಥಾಲಯ ಅಭಿಯಾನ'ದ ಉಡುಪಿ ಜಿಲ್ಲೆಯ ಸಹ ಸಂಚಾಲಕರನ್ನಾಗಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಅವರನ್ನು ನೇಮಕ ಮಾಡಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಆದೇಶಿಸಿದ್ದಾರೆ.
ಸಮಿತಿ ಸದಸ್ಯರಾಗಿ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಮತ್ತು ರಂಜನಿ ವಸಂತ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಂಘಟನಾ ಕಾರ್ಯದರ್ಶಿಗಳಾದ ಸತೀಶ್ ಕೊಡವೂರು, ರಾಘವೇಂದ್ರ ಪ್ರಭು ಕರ್ವಾಲು, ಡಾ.ರಶ್ಮಿ ಅಮ್ಮೆಂಬಳ, ದೀಪಾ ಚಂದ್ರಕಾಂತ್ ಮತ್ತು ಸಿದ್ದಬಸಯ್ಯಸ್ವಾಮಿ ಚಿಕ್ಕಮಠ ಅವರನ್ನು ನೇಮಿಸಲಾಗಿದೆ.
