35 ಲಕ್ಷ ಮೌಲ್ಯದ ಗಾಂಜಾ ವಶ: ವಿದ್ಯಾರ್ಥಿನಿ ಸೆರೆ

ಲೋಕಬಂಧು ನ್ಯೂಸ್ | ಮೂಲ್ಕಿ, ಮೇ 13
ಬರೋಬ್ಬರಿ 35 ಲಕ್ಷ ರೂ. ಮೌಲ್ಯದ ಸುಮಾರು 1.42 ಕಿ.ಗ್ರಾಂ ಹೈಡ್ರೋ ವೀಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಮೂಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೋ ವೀಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಸುಹಾನ (21)ಳನ್ನು ಬಂಧಿಸಲಾಗಿದೆ. ಆಕೆ ಶಿವಮೊಗ್ಗದ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾಗಿದ್ದು ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು.


35 ಲಕ್ಷ ರೂ. ಮೌಲ್ಯದ ಹೈಡ್ರೋ ವೀಡ್ ಗಾಂಜಾ, ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.


ಮಾದಕ ವಸ್ತುವನ್ನು ಚೆನ್ನೈನಿಂದ ತರಿಸಿಕೊಂಡು ಮಾರಾಟ ಮಾಡಿ ಹಣ ಗಳಿಸುವ ಉದ್ದೇಶ ಹೊಂದಿದ್ದಳು. ಬಂಧಿತಳ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.