ಸುವೇಂದು ಅಧಿಕಾರಿ ಶಾಸಕಾಂಗ ಪಕ್ಷದ ನಾಯಕ

ಲೋಕಬಂಧು ನ್ಯೂಸ್ | ಕೋಲ್ಕತ್ತಾ, ಮೇ 8
ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದ್ದು, ಆ ಮೂಲಕ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಮೇ 9ರಂದು ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕೋಲ್ಕತ್ತಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಹೆಸರನ್ನು ಪ್ರಸ್ತಾಪಿಸಲಾಯಿತು ಮತ್ತು ಹೊಸದಾಗಿ ಆಯ್ಕೆಯಾದ ಎಲ್ಲಾ ಬಿಜೆಪಿ ಶಾಸಕರು ಅದನ್ನು ಅನುಮೋದಿಸಿದರು.


ನಂತರ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧಿಕೃತವಾಗಿ ಸುವೇಂದು ಅಧಿಕಾರಿ ಹೆಸರನ್ನು ಘೋಷಿಸಿದರು.


ಮೇ 9ರಂದು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದ್ದು ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ರಾಜ್ಯಪಾಲರ ಭೇಟಿ
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸುವೇಂದು ಅಧಿಕಾರಿ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಎನ್. ರವಿ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.