ಸುವೇಂದು ಅಧಿಕಾರಿ ಪಿಎ ಗುಂಡಿಗೆ ಬಲಿ

ಲೋಕಬಂಧು ನ್ಯೂಸ್ ಕೋಲ್ಕತ್ತಾ, ಮೇ 7
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಯ ಆಪ್ತ ಸಹಾಯಕ (ಪಿಎ)ಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರನಾಥ್ ದತ್ ಎಂದು ಗುರುತಿಸಲಾಗಿದೆ.


ಗುಂಡಿನ ಚಕಮಕಿಯಲ್ಲಿ ಚಂದ್ರನಾಥ್ ಎದೆಗೆ ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.


ಈ ಘಟನೆಗೆ ಟಿಎಂಸಿ ಕಾರಣ ಎಂದು ಬಿಜೆಪಿ ಆರೋಪಿಸಿದೆ.