ಲೋಕಬಂಧು ನ್ಯೂಸ್ ಉಡುಪಿ, ಮೇ 6
ಎಮ್.ಆರ್.ಪಿ.ಎಲ್ ಮತ್ತು ಕರ್ಣಾಟಕ ಬ್ಯಾಂಕ್ ವತಿಯಿಂದ ಸಿ.ಎಸ್.ಆರ್. ಅನುದಾನದಡಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮೂರು ವಾಹನಗಳನ್ನು ನೀಡಲಾಗಿದ್ದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮೂಲಕ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ಎಜಿಎಂ ರಮೇಶ್ ವೈದ್ಯ, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಕೆ, ಜಿಲ್ಲಾ ಎನ್ಫೋರ್ಸ್'ಮೆಂಟ್ ಅಧಿಕಾರಿ ಡಾ.ಶ್ರೀರಾಮ ರಾವ್ ಕೆ, ಡಿಪಿಡಿಓ ಡಾ.ಪ್ರಶಾಂತ್ ಭಟ್, ಜಿಲ್ಲಾ ಎನ್ ಸಿ.ಡಿ. ಅಧಿಕಾರಿ ಡಾ.ಲತಾ ನಾಯಕ್ ಮೊದಲಾದವರಿದ್ದರು.