ಲೋಕಬಂಧು ನ್ಯೂಸ್ | ಉಡುಪಿ, ಮೇ 15
ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಶುಕ್ರವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿ, ಮಾಹಿತಿ ಪಡೆದರು.
ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್ಥ್ಯ, ಒಳಹರಿವು ಬಗ್ಗೆ ಚರ್ಚೆ ನಡೆಸಿ ಉಡುಪಿ ನಗರದ ಜನತೆಗೆ ನಿರಂತರ ನೀರು ಸರಬರಾಜಿಗೆ ಯಾವುದೇ ಯಾವುದೇ ಸಮಸ್ಯೆಯಾಗದಂತೆ ಈಗಿನಿಂದಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಾರಾಹಿ ಯೋಜನೆಯ ಮೂಲಕವೂ ನಗರಕ್ಕೆ ನೀರು ಸರಬರಾಜಾಗುತ್ತಿದ್ದು, ಬಜೆ ಅಣೆಕಟ್ಟಿನಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚು ನೀರಿನ ಲಭ್ಯತೆ ಕಡಿಮೆ ಇದ್ದು, ಉಡುಪಿ ನಗರ ಭಾಗಕ್ಕೆ ನಿರಂತರ ನೀರು ಪೂರೈಕೆಗೆ ಸಮಸ್ಯೆಯಾಗದಂತೆ ಕ್ರಮ ವಹಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಕಾರ್ಯ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಘಟಕವನ್ನು ಉತ್ತಮವಾಗಿ ನಿರ್ವಹಿಸಿ ಉಡುಪಿ ಜನತೆಗೆ ನಿರಂತರ ಶುದ್ಧ ಕುಡಿಯುವ ನೀರು ಸರಬರಾಜಿಗೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದರು.
ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಸದಸ್ಯ ಗಿರೀಶ್ ಅಂಚನ್, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್, ಸಹಾಯಕ ಅಭಿಯಂತರ ಚೇತನ್, ವಾರಾಹಿ ಯೋಜನೆಯ ಆರ್ಕೇಶ್ ಗೌಡ ಮೊದಲಾದವರಿದ್ದರು.
