ಜು.1: ಪತ್ರಕರ್ತರಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ

ಲೋಕಬಂಧು ನ್ಯೂಸ್ | ಉಡುಪಿ, ಜೂ.29
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಲೊಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆ ಸಹಯೋಗದೊಂದಿಗೆ ಜುಲೈ 1ರಂದು ನಗರದ ಐಎಂಎ ಭವನದಲ್ಲಿ ಪತ್ರಿಕಾ ದಿನಾಚರಣೆ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿ ಡಾ.ಸಂತೋಷ್ ಅವರಿಂದ ಪತ್ರಕರ್ತರ ಒತ್ತಡ ನಿರ್ವಹಣೆ ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


ಉಡುಪಿ ಮಿಷನ್ ಆಸ್ಪತ್ರೆ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಅತಿಥಿಯಾಗಿ ಭಾಗವಹಿಸಲಿದ್ದು, ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆ ವಹಿಸುವರು.


ಈ ಬಾರಿಯ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ಉತ್ತೀರ್ಣರಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಗುವುದು.


ಹಿರಿಯ ವ್ಯಂಗ್ಯಚಿತ್ರಕಾರ ಜೇಮ್ಸ್ ವಾಜ಼್ ಅವರಿಗೆ ಪತ್ರಿಕಾ ದಿನದ ಗೌರವ ನೀಡಲಾಗುವುದು.


ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಯೋಜನೆಯಲ್ಲಿ ಆಯ್ಕೆಯಾದ ಪತ್ರಕರ್ತರಿಗೆ ಬಸ್ ಪಾಸ್ ವಿತರಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ತಿಳಿಸಿದ್ದಾರೆ.