ಜೂ.12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ

ಲೋಕಬಂಧು ನ್ಯೂಸ್ | ಉಡುಪಿ, ಜೂ.10
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಜೂನ್ 12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.
ಮಧ್ಯಾಹ್ನ 12:30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ ಬೆಳೆಸಲಿದ್ದಾರೆ.


ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ದರ್ಶನ ಮುಗಿಸಿ ಅಪರಾಹ್ನ 3 ಗಂಟೆಗೆ ರಸ್ತೆ ಮಾರ್ಗವಾಗಿ ಮರಳಿ ಮಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಚೆನ್ನೈಗೆ ವಾಪಸಾಗಲಿದ್ದಾರೆ.


ಸಿಎಂ ವಿಜಯ್  'ಝಡ್+' ವಲಯದ ಅತ್ಯುನ್ನತ ಭದ್ರತೆ ಹೊಂದಿದ್ದು ಕರ್ನಾಟಕದಲ್ಲೂ ಅಪಾರ ಜನ ಬೆಂಬಲ ಹಾಗೂ ಅಭಿಮಾನಿ ಬಳಗ ಹೊಂದಿರುವುದರಿಂದ ಅವರು ಸಂಚರಿಸುವ ಮಾರ್ಗದ ಪ್ರಮುಖ ಜಂಕ್ಷನ್'ಗಳಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಜಮಾಯಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಅಗತ್ಯ ಸಿಬ್ಬಂದಿ ನಿಯೋಜಿಸುವಂತೆ ಸೂಚಿಸಲಾಗಿದೆ.