ಜೂ.19: ರಾಹುಲ್ ಗಾಂಧಿ ಜನ್ಮ ದಿನಾಚರಣೆ- ದಿವ್ಯಾಂಗರಿಗೆ ಸಲಕರಣೆ, ಪೌಷ್ಟಿಕ ಆಹಾರ ಕಿಟ್ ವಿತರಣೆ

ಲೋಕಬಂಧು ನ್ಯೂಸ್ | ಉಡುಪಿ, ಜೂ.16
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಜನ್ಮದಿನದ ಅಂಗವಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ದಿವ್ಯಾಂಗರಿಗೆ ಸಹಾಯಕ ಸಾಧನಗಳು ಹಾಗೂ ಪೌಷ್ಟಿಕ ಆಹಾರ ಕಿಟ್ ವಿತರಣೆ ಜೂ. 19ರಂದು ಬೆಳಿಗ್ಗೆ 10 ಗಂಟೆಗೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ.
ಜನರ ನೋವಿಗೆ ನಿರಂತರ ಸ್ಪಂದಿಸುವ, ಸಾಮಾಜಿಕ ನ್ಯಾಯದ ಪರ ಹೋರಾಡುವ ಮಾನವೀಯ ಹೃದಯದ ನಾಯಕ ರಾಹುಲ್ ಗಾಂಧಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಮತ್ತು ಮಾನವೀಯ ಕಳಕಳಿಯೊಂದಿಗೆ ಆಚರಿಸುವ ನಿಟ್ಟಿನಲ್ಲಿ 75 ಮಂದಿ ವಿಶೇಷಚೇತನರಿಗೆ ಶ್ರವಣ ಸಾಧನ, ಕಮೋಡ್ ವ್ಹೀಲ್ ಚೇರ್, ವಾಟರ್ ಬೆಡ್, ವಾಕರ್, ವಾಕಿಂಗ್ ಸ್ಟಿಕ್, ಕ್ರಚರ್ಸ್ ಹಾಗೂ ಪೌಷ್ಟಿಕ ಆಹಾರ ಕಿಟ್'ಗಳನ್ನು ವಿತರಿಸಲಾಗುವುದು ಎಂದು ರಮೇಶ್ ಕಾಂಚನ್ ತಿಳಿಸಿದ್ದಾರೆ.