ಲೋಕಬಂಧು ನ್ಯೂಸ್ | ಉಡುಪಿ, ಜೂ.26
ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಉಡುಪಿ ಘಟಕ ಹಾಗೂ ಮಹಿಳಾ ವಿಭಾಗದಿಂದ ಯಕ್ಷಧ್ರುವ ಪಟ್ಲ ದಶಮ ಸಂಭ್ರಮದ ಸವಿನೆನಪಿಗಾಗಿ ಜೂ.27ರಂದು ಅಪರಾಹ್ನ 2.30ರಿಂದ ತೆಂಕುತಿಟ್ಟಿನ ಯಕ್ಷಗಾನ ರಸದೌತಣದ ಎರಡನೇ ವರ್ಷದ ಕಾರ್ಯಕ್ರಮ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ.
ಯಕ್ಷಧ್ರುವ ಕಲಾ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮಣಿಪಾಲ ಮಾಹೆ ವಿ.ವಿ. ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್, ಅಂಬಲಪಾಡಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.
ಹೈದರಾಬಾದ್‌ನ ಹೋಟೆಲ್ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರಿಗೆ ಯಕ್ಷಧ್ರುವ ಕಲಾ ಗೌರವಾರ್ಪಣೆ ಮಾಡಲಾಗುವುದು. ಪ್ರೊ.ಪವನ್ ಕಿರಣ್‌ಕೆರೆ ಅಭಿನಂದನೆಯ ಮಾತುಗಳನ್ನಾಡುವರು.
ಬಳಿಕ ಸಮುದ್ರ ಮಥನ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಸಂಘಟಕ ಸುಧಾಕರ ಆಚಾರ್ಯ ತಿಳಿಸಿದ್ದಾರೆ.
