36 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಲೋಕಬಂಧು ನ್ಯೂಸ್ | ಉಡುಪಿ, ಜೂ.23
ಕಳೆದ ಸುಮಾರು 36 ವರ್ಷದಿಂದ ತಲೆಮರೆಸಿಕೊಂಡಿದ್ದ ಉಡುಪಿ ನಗರ ಠಾಣೆಯ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಹಾವೇರಿ ಜಿಲ್ಲೆಯಲ್ಲಿ ದಸ್ತಗಿರಿ ಮಾಡಲಾಗಿದೆ.
1990ರ ಜೂ. 21ರಂದು ಉಡುಪಿ ನಗರ ಠಾಣೆಯಲ್ಲಿ ಅರಣ್ಯ ಕಾಯ್ದೆಯಡಿ ದಾಖಲಾದ ಪ್ರಕರಣದ ಆರೋಪಿ ಹಾವೇರಿ ಹಿರೇಕೆರೂರಿನ ನಿಟ್ಟೂರು ನಿವಾಸಿ ನೂರುಲ್ಲ (66) ಎಂಬಾತನನ್ನು ಸೋಮವಾರ ಬಂಧಿಸಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


ಆತನಿಗೆ 1990ರ ಜೂ.22ರಿಂದ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಆತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.


ನೂರುಲ್ಲನನ್ನು ಜೂ.22ರಂದು ವಾರೆಂಟ್'ನೊಂದಿಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.