ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪದಾಧಿಕಾರಿಗಳು ಕೃಷ್ಣಮಠ ಭೇಟಿ

ಲೋಕಬಂಧು ನ್ಯೂಸ್ | ಉಡುಪಿ, ಜೂ.17
ಉಡುಪಿ ಕೃಷ್ಣ ಮಠಕ್ಕೆ ಬೆಂಗಳೂರಿನ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್, ಉಪಾಧ್ಯಕ್ಷ ರಾಜಶೇಖರ್ ಮತ್ತು ಪ್ರಧಾನ ಕಾರ್ಯದರ್ಶಿ ಡಾ.ಎಂ.ಸತ್ಯಪ್ರಕಾಶ್ ಬುಧವಾರ ಭೇಟಿ ನೀಡಿ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು, ಉಡುಪಿ ಜಿಲ್ಲಾ ಬ್ರಾಹ್ಮಣ ಸಭಾ ಅಧ್ಯಕ್ಷ ಸಂದೀಪ್ ಕುಮಾರ್ ಮಂಜ, ಸಂಘಟನಾ ಕಾರ್ಯದರ್ಶಿ ನಾಗರಾಜ್ ಉಪಾಧ್ಯಾಯ ಮೊದಲಾದವರಿದ್ದರು.