ಲೋಕಬಂಧು ನ್ಯೂಸ್ | ಉಡುಪಿ, ಜೂ.14
ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಮೇಲ್ಸೇತುವೆಯ ಮಂಗಳೂರಿನಿಂದ ಕುಂದಾಪುರ ಕಡೆಗೆ ಏಕಪಾರ್ಶ್ವ ರಸ್ತೆ ಸಂಚಾರಕ್ಕೆ ಭಾನುವಾರ ಅನುವು ಮಾಡಿಕೊಡಲಾಯಿತು.
ಅಂಬಲಪಾಡಿ ಮೇಲ್ಸೇತುವೆ ಕೆಳಬಾಗದ ಸರ್ವಿಸ್ ರಸ್ತೆ ಹೊಂಡಗಳಿಂದ ತುಂಬಿದ್ದು, ಮಳೆಯಿಂದ ಜಲಾವೃತವಾಗಿ ಸಂಚಾರ ದುಸ್ತರವಾಗುವ ಹಿನ್ನೆಲೆಯಲ್ಲಿ ತುರ್ತಾಗಿ ಮೇಲ್ಸೇತುವೆಯಲ್ಲಿ ಏಕಮುಖ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಸೋಮವಾರ (ಜೂ.15) ಮತ್ತೊಂದು ಬದಿಯ ರಸ್ತೆ ಸಂಚಾರಕ್ಕೆ ಮುಕ್ತವಾಗಲಿದೆ.
ಸಾರ್ವಜನಿಕರು ಮತ್ತು ವಾಹನಗಳ ಸಂಚಾರಕ್ಕೆ ಅನುಕೂಲವಾಗಬೇಕೆಂಬ ಕಾರಣಕ್ಕೆ ತುರ್ತಾಗಿ ಈ ರಸ್ತೆಯನ್ನು ಮುಕ್ತಗೊಳಿಸಲಾಗಿದೆ. ಸರ್ವಿಸ್ ರಸ್ತೆಯ ವಾಹನ ದಟ್ಟಣೆ ಕಡಿಮೆಯಾದಾಗ ತುರ್ತು ರಿಪೇರಿ ಮಾಡಲು ನಿರ್ದೇಶನ ನೀಡಿರುವುದಾಗಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಯಶಪಾಲ್ ಸುವರ್ಣ, ನಗರಸಭೆ ಮಾಜಿ ಸದಸ್ಯ ಹರೀಶ್ ಶೆಟ್ಟಿ ಅಂಬಲಪಾಡಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ ಶೆಟ್ಟಿ ಬಿಲ್ಲಾಡಿ, ಉಪಾಧ್ಯಕ್ಷ ಗಜೇಂದ್ರ ಎಸ್. ಪೇಲೆಮನೆ, ಪ್ರಧಾನ ಕಾರ್ಯದರ್ಶಿ ಅಭಿರಾಜ ಸುವರ್ಣ, ಪ್ರದೀಪ್ ಕುಂದರ್ ಮೊದಲಾದವರಿದ್ದರು.
.jpg)
.jpg)