ಕೊಲ್ಲೂರಿಗೆ ಅನಂತ್ ಅಂಬಾನಿ ಭೇಟಿ

ಲೋಕಬಂಧು ನ್ಯೂಸ್ | ಕುಂದಾಪುರ, ಜೂ.14
ಭಾರತದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಭಾನುವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದರು.
ತಮ್ಮ‌ ಕುಟುಂಬದ ಆಧ್ಯಾತ್ಮಿಕ ಗುರುಗಳೊಂದಿಗೆ ಆಗಮಿಸಿ, ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಕುಟುಂಬ ಕ್ಷೇಮಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ದೇವಸ್ಥಾನದ ವತಿಯಿಂದ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಅನಂತ ಅಂಬಾನಿ ಅವರನ್ನು ಗೌರವಿಸಲಾಯಿತು. ದೇವಸ್ಥಾನದ ಅರ್ಚಕರು ಪ್ರಸಾದ ನೀಡಿದರು.
ಇತ್ತೀಚಿನ ದಿನಗಳಲ್ಲಿ ಅನಂತ ಅಂಬಾನಿ ದೇಶದ ವಿವಿಧ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದು, ವಿಶೇಷವಾಗಿ ಕೇರಳ ಸೇರಿದಂತೆ ಹಲವು ರಾಜ್ಯಗಳ ದೇವಾಲಯಗಳಲ್ಲಿ ದರ್ಶನ ಹಾಗೂ ಪೂಜೆ ನೆರವೇರಿಸುತ್ತಿದ್ದಾರೆ. ಅದರ ಮುಂದುವರಿದ ಭಾಗವಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.