ಎಸ್ಐಆರ್ ಬಗ್ಗೆ ಜಾಗರೂಕರಾಗಿರಿ

ಲೋಕಬಂಧು ನ್ಯೂಸ್ | ಬ್ರಹ್ಮಾವರ, ಜೂ.19
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ಪ್ರಧಾನಿಯಾಗಬೇಕಾದರೆ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕುರಿತು ನಾವೆಲ್ಲ ತುಂಬಾ ಜಾಗರೂಕರಾಗಿರಬೇಕು ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಎಚ್ಚರಿಸಿದರು.
ರಾಹುಲ್ ಗಾಂಧಿ ಹುಟ್ಟುಹಬ್ಬ ಅಂಗವಾಗಿ ಬ್ರಹ್ಮಾವರದಲ್ಲಿ ಶುಕ್ರವಾರ ಆಯೋಜಿಸಿದ್ದ ಹಿರಿಯ ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಹಾಗೂ ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.


ಬಿಜೆಪಿ ಶ್ರೀಮಂತರ ಪರ
ಬಿಜೆಪಿ, ಉದ್ಯಮಿಗಳು ಮತ್ತು ಶ್ರೀಮಂತರ ಪರ ಇರುವ ಪಕ್ಷವಾಗಿದ್ದು, ಕಾಂಗ್ರೆಸ್ ಪಕ್ಷ ಸದಾ ಬಡವರು, ರೈತರು ಮತ್ತು ಸಾಮಾನ್ಯ ಜನರ ಪರವಾಗಿ ಕೆಲಸ ಮಾಡುತ್ತಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಜನರು ಸಂತೋಷವಾಗಿದ್ದು, ಈ ಯೋಜನೆಗಳ ಯಶಸ್ಸನ್ನು ಕಂಡು ಈಗ ಬಿಜೆಪಿಯವರೂ ಅದೇ ಮಾದರಿಯ ಕಾರ್ಯಕ್ರಮಗಳನ್ನು ಅನುಸರಿಸಲು ಮುಂದಾಗಿದ್ದಾರೆ ಎಂದು ಪ್ರಸಾದ್ ರಾಜ್ ಕಾಂಚನ್ ಟೀಕಿಸಿದರು.


ರಾಹುಲ್ ಗಾಂಧಿ ನಾಯಕತ್ವದಲ್ಲಿ ದೇಶದಲ್ಲಿ ಪರಿವರ್ತನೆ ಸಾಧ್ಯವಾಗಲಿದ್ದು, ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ಕೆಲಸ ಮಾಡಬೇಕು ಎಂದವರು ಕರೆ ನೀಡಿದರು.


ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ ಅಧ್ಯಕ್ಷತೆ ವಹಿಸಿದ್ದರು.


ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿದರು.


ಪಕ್ಷದ ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ನಿತ್ಯಾನಂದ ಶೆಟ್ಟಿ, ಭುಜಂಗ ಶೆಟ್ಟಿ, ವೆರೋನಿಕಾ ಕರ್ನೇಲಿಯೊ, ಪ್ರಖ್ಯಾತ್ ಶೆಟ್ಟಿ, ಜ್ಯೋತಿ ಹೆಬ್ಬಾರ್, ಗೋಪಿಕೃಷ್ಣ ನಾಯ್ಕ್, ರೋಶನ್ ಕುಮಾರ್ ಶೆಟ್ಟಿ ಮೊದಲಾದವರಿದ್ದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಕಾರ್ಯಕರ್ತರನ್ನು ಗೌರವಿಸಲಾಯಿತು. ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಿಸಲಾಯಿತು.


ಡಾ.ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.