ಲೋಕಬಂಧು ನ್ಯೂಸ್ | ಕುಂದಾಪುರ, ಜೂ.16
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸೋಮವಾರ ಬೆಳಿಗ್ಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದೇವಿಯ ದರ್ಶನ ಪಡೆದು ಅರ್ಚಕರ ಮೂಲಕ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಿದರು.
ಭಾನುವಾರ ರಾತ್ರಿ ಕೊಲ್ಲೂರಿಗೆ ಬಂದು ವಾಸ್ತವ್ಯ ಮಾಡಿದ್ದ ಅವರು, ಅಮಾವಾಸ್ಯೆ ದಿನವಾದ ಸೋಮವಾರ ಬೆಳಿಗ್ಗೆ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವರಾದ ವಿ.ಸುನಿಲ್‌ಕುಮಾರ್, ಭೈರತಿ ಬಸವರಾಜ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ತಾ.ಪಂ. ಮಾಜಿ ಸದಸ್ಯ ಉಮೇಶ್ ಶೆಟ್ಟಿ ಕಲ್ಗದ್ದೆ, ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮೊದಲಾದವರಿದ್ದರು.
