ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್

ಲೋಕಬಂಧು ನ್ಯೂಸ್ ನವದೆಹಲಿ, ಜೂ.4
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬುಧವಾರ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷರ ಆದೇಶದಂತೆ ಈ ನೇಮಕಾತಿ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದುವರೆಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್‌ ಅವರ ಸೇವೆ ಹಾಗೂ ಪಕ್ಷಕ್ಕೆ ನೀಡಿದ ಕೊಡುಗೆಗಳನ್ನು ಕಾಂಗ್ರೆಸ್ ಪಕ್ಷ ಪ್ರಶಂಸಿಸಿದ್ದು, ಅವರ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.


ಬಿ.ಕೆ. ಹರಿಪ್ರಸಾದ್ ಅವರ ನೇಮಕದೊಂದಿಗೆ ರಾಜ್ಯ ಕಾಂಗ್ರೆಸ್ ಸಂಘಟನೆಯಲ್ಲಿ ಹೊಸ ನಾಯಕತ್ವಕ್ಕೆ ಅವಕಾಶ ದೊರೆತಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ.