ರಕ್ತದಾನ ಜಾಗೃತಿ ಕ್ಯಾನ್ವಾಸ್ ಚಿತ್ರ ಅನಾವರಣ

ಲೋಕಬಂಧು ನ್ಯೂಸ್ | ಮಣಿಪಾಲ, ಜೂ.18
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ ಸಂದರ್ಭದಲ್ಲಿ ರಕ್ತದಾನ ಜಾಗೃತಿಗಾಗಿ ಕ್ಯಾನ್ವಾಸ್ ಚಿತ್ರ ಪ್ರದರ್ಶಿಸಲಾಯಿತು.
ಬಂಟಕಲ್ಲು ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೊ.ಡಾ. ರಾಧಾಕೃಷ್ಣ ಎಸ್. ಐತಾಳ್ ಕಾರ್ಯಕ್ರಮ ಉದ್ಘಾಟಿಸಿ, ರಕ್ತದಾನ ಅರ್ಥಪೂರ್ಣ ಸೇವಾ ಕಾರ್ಯಗಳಲ್ಲಿ ಒಂದಾಗಿದ್ದು, ಶಿಕ್ಷಣ ಸಂಸ್ಥೆಗಳು ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸುವಲ್ಲಿ ಮತ್ತು ನಿಯಮಿತ ಸ್ವಯಂಪ್ರೇರಿತ ರಕ್ತದಾನವನ್ನು ಉತ್ತೇಜಿಸುವಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಿದರು.
ಸಾಮಾಜಿಕ ಜವಾಬ್ದಾರಿ ಮತ್ತು ಸಹಾನುಭೂತಿ ಆರೋಗ್ಯ ಸೇವೆಗಳನ್ನು ಗಮನಾರ್ಹವಾಗಿ ಬಲಪಡಿಸುತ್ತದೆ ಮತ್ತು ಅಸಂಖ್ಯಾತ ಜೀವಗಳನ್ನು ಉಳಿಸುತ್ತದೆ ಎಂದವರು ಹೇಳಿದರು.


ಉಡುಪಿ ಎಂಜಿಎಂ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯಕ್ ಗೌರವ ಅತಿಥಿಯಾಗಿದ್ದರು.


ಮಾಹೆ ಬೋಧನಾ ಆಸ್ಪತ್ರೆಗಳ ಸಿಒಒ ಡಾ. ಸುಧಾಕರ್ ಕಂಟಿಪುಡಿ, ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ರಕ್ತಕೇಂದ್ರ ಮುಖ್ಯಸ್ಥ ಡಾ. ಗಣೇಶ್ ಮೋಹನ್ ಮತ್ತು ರಕ್ತಪೂರಣ ಔಷಧ ವಿಭಾಗದ ಪ್ರಾಧ್ಯಾಪಕಿ ಡಾ.ಶಮೀ ಶಾಸ್ತ್ರಿ  ಉಪಸ್ಥಿತರಿದ್ದರು.


ಅನೇಕ ಬಾರಿ ರಕ್ತದಾನ ಶಿಬಿರ ಆಯೋಜಿಸಿದ 80ಕ್ಕಿಂತ ಅಧಿಕ ಸಂಘಸಂಸ್ಥೆಗಳು ಮತ್ತು ರಕ್ತದಾನಿಗಳನ್ನು ಗೌರವಿಸಲಾಯಿತು.


ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ರಕ್ತ ಕೇಂದ್ರದ ಅತ್ಯುತ್ತಮ ತಾಂತ್ರಿಕ ಸಿಬ್ಬಂದಿ ಮತ್ತು ಅತ್ಯುತ್ತಮ ತಾಂತ್ರಿಕೇತರ ಸಿಬ್ಬಂದಿಗಳಿಗೆ ಡಾ.ಸತೀಶ್ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಪ್ರಶಸ್ತಿ ವಿತರಿಸಲಾಯಿತು.


ರಕ್ತದಾನದ ಕುರಿತು ಜಾಗೃತಿ ಮೂಡಿಸುವ ಗುರಿ ಹೊಂದಿರುವ ಕ್ಯಾನ್ವಾಸ್ ವರ್ಣಚಿತ್ರವನ್ನು ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಅನಾವರಣಗೊಳಿಸಲಾಯಿತು.


ಸಮುದಾಯ ವೈದ್ಯಕೀಯ ವಿಭಾಗದ ಕಲಾವಿದ ಶ್ರೀನಾಥ್ ಮಣಿಪಾಲ್ ಕಲಾಕೃತಿ ರಚಿಸಿದ್ದರು. ವಿಶ್ವೇಶ್ ಎನ್. ನಿರೂಪಿಸಿದರು.