ಲೋಕಬಂಧು ನ್ಯೂಸ್ | ಉಡುಪಿ,ಜೂ.29
ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ತನ್ನ ಪ್ರದೇಶಾಭಿವೃದ್ಧಿ ನಿಧಿಯಡಿ ಮಹೇಂದ್ರ ಕಂಪನಿಯ ಬೊಲೆರೋ ಜೀಪ್'ನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ನೀಡಿದ್ದು, ಸೋಮವಾರ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶಾಸಕ ಸುನಿಲ್ ಕುಮಾರ್ ಅವರು ಎಸ್.ಪಿ. ಹರಿರಾಮ್ ಶಂಕರ್ ಅವರಿಗೆ ಕೀ ನೀಡುವ ಮೂಲಕ ವಾಹನವನ್ನು ಇಲಾಖೆಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಡಿಎಆರ್ ಪೊಲೀಸ್ ಉಪಾಧೀಕ್ಷಕ ತಿಮ್ಮಪ್ಪ ಗೌಡ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್ ನಿರೀಕ್ಷಕ ರವಿ ಕುಮಾರ್, ಜಿಲ್ಲಾ ಪೊಲೀಸ್ ಕಚೇರಿ ಸಹಾಯಕ ಆಡಳಿತಾಧಿಕಾರಿ ಗೋಪಾಲ್ ಇದ್ದರು.
