ಲೋಕಬಂಧು ನ್ಯೂಸ್ | ಉಡುಪಿ, ಜೂ.25
ಉಡುಪಿ ನಗರ ಪೊಲೀಸ್ ಠಾಣಾ ರೌಡಿ, ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ನಿವಾಸಿ ಚರಣ್ ರಾಜ್ (29)ನನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಮೇರೆಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೂ.24ರಂದು ಬಂಧನ ಆದೇಶ ನೀಡಿದ್ದಾರೆ.
ಆತನ ವಿರುದ್ದ ಬಂಟ್ವಾಳ ಗ್ರಾಮಾಂತರ, ಸುರತ್ಕಲ್, ಮಂಗಳೂರು ಪೂರ್ವ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲೆ ದೌರ್ಜನ್ಯ, ಮಾದಕ ದ್ರವ್ಯ ಸೇವನೆ, ಮಾದಕ ದ್ರವ್ಯ ಸಾಗಾಟ, ಎಸ್.ಸಿ./ಎಸ್.ಟಿ. ಕಾಯ್ದೆ ಸಹಿತ ಒಟ್ಟು 10 ಪ್ರಕರಣ ದಾಖಲಾಗಿವೆ. ಅವುಗಳ ಪೈಕಿ 3 ಪ್ರಕರಣಗಳಲ್ಲಿ ಶಿಕ್ಷೆ, 2 ಪ್ರಕರಣಗಳಲ್ಲಿ ಖುಲಾಸೆ, 4 ಪ್ರಕರಣ ನ್ಯಾಯಾಂಗ ವಿಚಾರಣೆ ಹಾಗೂ ಉಳಿದ 1 ಪ್ರಕರಣ ತನಿಖೆಯಲ್ಲಿದೆ.
ಬಂಧಿತ ಆರೋಪಿಯನ್ನು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.
