ಲೋಕಬಂಧು ನ್ಯೂಸ್ | ಬ್ರಹ್ಮಾವರ, ಜೂ.10
ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಗಂಡು ಮಗುವೊಂದು ಮೃತಪಟ್ಟ ದಾರುಣ ಘಟನೆ ಇಲ್ಲಿಗೆ ಸಮೀಪದ ಹೇರಂಜೆಯಲ್ಲಿ ಸಂಭವಿಸಿದೆ.
ಈ ದಂಪತಿಗೆ ದಿಯಾ (6) ಎಂಬ ಇನ್ನೊಂದು ಬಾಲಕಿ ಇದ್ದು, ಆಕೆ ಬ್ರಹ್ಮಾವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.
ಪ್ರಶಾಂತ್ ಪೂಜಾರಿ ಕಳೆದ ಸುಮಾರು 13 ವರ್ಷಗಳಿಂದ ಬ್ರಹ್ಮಾವರ ಗಾಂಧಿ ಮೈದಾನದ ಸಮೀಪ ಸಣ್ಣ ಗಾಡಿಯಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದಾರೆ.
ಮಾಹಿತಿಗಳ ಪ್ರಕಾರ ಮಂಗಳವಾರ ಬೆಳಿಗ್ಗೆ ಸುಮಾರು 8.15 ಗಂಟೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಗಳು ದಿಯಾಳನ್ನು ಶಾಲಾ ಬಸ್ಸಿಗೆ ಕಳುಹಿಸಲು ಸುಚಿತ್ರ ಪೂಜಾರಿ ಮಗ ದಕ್ಷ್'ನನ್ನು ಕೈಯಲ್ಲಿ ಎತ್ತಿಕೊಂಡು ಮನೆಯಿಂದ ಹೊರಟಿದ್ದ ವೇಳೆ ರಸ್ತೆಯ ಬದಿಯಲ್ಲಿದ್ದ ಸುಮಾರು 40 ಅಡಿ ಎತ್ತರದ ತೆಂಗಿನ ಮರದಿಂದ ತೆಂಗಿನಕಾಯಿ ಕೆಳಗೆ ಬಿದ್ದು ದಕ್ಷನ ತಲೆಗೆ ಬಡಿದಿದೆ.
ಗಂಭೀರ ಗಾಯಗೊಂಡಿದ್ದ ಮಗುವನ್ನು ತಕ್ಷಣ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆಯನ್ನೂ ನಡೆಸಿದ್ದರು. ಆದರೆ, ಮೆದುಳಿಗೆ ತೀವ್ರ ಪೆಟ್ಟಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.